ಮಮ ಯೋನಿರ್ಮಹದ್ಭ್ರಹ್ಮ ತಸ್ಮಿನ್ ಗರ್ಭಂ ದಧಾಮ್ಯಹಮ್ ।
ಸಂಭವಃ ಸರ್ವಭೂತಾನಾಂ ತತೋ ಭವತಿ ಭಾರತ ॥
ಎಲೈ ಅರ್ಜುನ! ನನ್ನ ಮಹದ್ ಬ್ರಹ್ಮರೂಪೀ ಮೂಲಪ್ರಕೃತಿಯು ಸಮಸ್ತ ಪ್ರಾಣಿಗಳ ಯೋನಿಯಾಗಿದೆ. ಅರ್ಥಾತ್ ಗರ್ಭಾಧಾನದ ಸ್ಥಾನವಾಗಿದೆ. ನಾನು ಆ ಯೋನಿಯಲ್ಲಿ ಚೇತನ ಸಮುದಾಯರೂಪೀ ಗರ್ಭವನ್ನು ಸ್ಥಾಪಿಸುತ್ತೇನೆ. ಆ ಜಡ-ಚೇತನ ಸಂಯೋಗದಿಂದ ಎಲ್ಲ ಪ್ರಾಣಿಗಳ ಉತ್ಪತ್ತಿಯಾಗುತ್ತದೆ. ॥3॥