ಕಾಮ್ಯಾನಾಂ ಕರ್ಮಣಾಂ ನ್ಯಾಸಂ ಸಂನ್ಯಾಸಂ ಕವಯೋ ವಿದುಃ ।
ಸರ್ವಕರ್ಮಫಲತ್ಯಾಗಂ ಪ್ರಾಹುಸ್ತ್ಯಾಗಂ ವಿಚಕ್ಷಣಾಃ ॥
ಶ್ರೀಭಗವಂತನು ಹೇಳಿದನು – ಎಷ್ಟೋ ಪಂಡಿತರು ಕಾಮ್ಯಕರ್ಮಗಳ ತ್ಯಾಗವನ್ನು ಸಂನ್ಯಾಸವೆಂದು ತಿಳಿಯುತ್ತಾರೆ ಹಾಗೂ ಇತರ ವಿಚಾರಶೀಲರಾದ ಜನರು ಎಲ್ಲ ಕರ್ಮಗಳ ಫಲತ್ಯಾಗವನ್ನು ತ್ಯಾಗವೆಂದು ಹೇಳುತ್ತಾರೆ. ॥2॥