ಬುದ್ಧ್ಯಾ ವಿಶುದ್ಧಯಾ ಯುಕ್ತೋ ಧೃತ್ಯಾತ್ಮಾನಂ ನಿಯಮ್ಯ ಚ ।
ಶಬ್ದಾದೀನ್ವಿಷಯಾಂಸ್ತ್ಯಕ್ತ್ವಾ ರಾಗದ್ವೇಷೌ ವ್ಯದಸ್ಯ ಚ ॥
ವಿವಿಕ್ತಸೇವೀ ಲಘ್ವಾಶೀ ಯತವಾಕ್ಕಾಯಮಾನಸಃ ।
ಧ್ಯಾನಯೋಗಪರೋ ನಿತ್ಯಂ ವೈರಾಗ್ಯಂ ಸಮುಪಾಶ್ರಿತಃ ॥
ಅಹಂಕಾರಂ ಬಲಂ ದರ್ಪಂ ಕಾಮಂ ಕ್ರೋಧಂ ಪರಿಗ್ರಹಮ್ ।
ವಿಮುಚ್ಯ ನಿರ್ಮಮಃ ಶಾಂತೋ ಬ್ರಹ್ಮಭೂಯಾಯ ಕಲ್ಪತೇ ॥
ವಿಶುದ್ಧ ಬುದ್ಧಿಯಿಂದ ಕೂಡಿದ, ಹಗುರವಾದ, ಸಾತ್ತ್ವಿಕ ಮತ್ತು ನಿಯಮಿತ ಭೋಜನ ಮಾಡುವವನು, ಶಬ್ದಾದಿ ವಿಷಯಗಳನ್ನು ತ್ಯಜಿಸಿ ಏಕಾಂತದಲ್ಲಿ ಶುದ್ಧ ಜಾಗದಲ್ಲಿ ವಾಸಿಸುವವನು, ಸಾತ್ವಿಕ ಧಾರಣಶಕ್ತಿಯಿಂದ ಅಂತಃಕರಣ ಮತ್ತು ಇಂದ್ರಿಯಗಳನ್ನು ಸಂಯಮದಲ್ಲಿಟ್ಟುಕೊಂಡು, ಮನಸ್ಸು, ವಾಣಿ, ಶರೀರ ವಶದಲ್ಲಿಟ್ಟುಕೊಂಡು, ರಾಗ-ದ್ವೇಷಗಳನ್ನು ಸರ್ವಥಾ ನಾಶಗೊಳಿಸಿ, ಚೆನ್ನಾದ ದೃಢವಾದ ವೈರಾಗ್ಯವನ್ನು ಆಶ್ರಯಿಸಿದ, ಅಹಂಕಾರ, ಬಲ, ದರ್ಪ, ಕಾಮ, ಕ್ರೋಧ, ಸಂಗ್ರಹವೃತ್ತಿ ಇವುಗಳನ್ನು ತ್ಯಜಿಸಿ ನಿರಂತರ ಧ್ಯಾನಯೋಗ ಪರಾಯಣನಾದ, ಮಮತಾರಹಿತ, ಶಾಂತಿಯುಕ್ತ ಪುರುಷನು ಸಚ್ಚಿದಾನಂದಘನ ಬ್ರಹ್ಮನಲ್ಲಿ ಅಭಿನ್ನಭಾವದಿಂದ ಸ್ಥಿತನಾಗಿರಲು ಪಾತ್ರನಾಗುತ್ತಾನೆ. ॥51, 52, 53॥