ಸರ್ವಸ್ಯ ಚಾಹಂ ಹೃದಿ ಸಂನಿವಿಷ್ಟೋ-
ಮತ್ತಃ ಸ್ಮೃತಿರ್ಜ್ಞಾನಮಪೋಹನಂ ಚ ।
ವೇದೈಶ್ಚ ಸರ್ವೈರಹಮೇವ ವೇದ್ಯೋ-
ವೇದಾಂತಕೃದ್ವೇದವಿದೇವ ಚಾಹಮ್ ॥
ನಾನೇ ಎಲ್ಲ ಪ್ರಾಣಿಗಳ ಹೃದಯದಲ್ಲಿ ಅಂತರ್ಯಾಮಿಯಾಗಿ ನೆಲೆಸಿದ್ದೇನೆ. ನನ್ನಿಂದಲೇ ಸ್ಮೃತಿ, ಜ್ಞಾನ ಉಂಟಾಗಿ, ಸಂಶಯಾದಿ ದೋಷಗಳ ನಿವಾರಣೆಯಾಗುತ್ತದೆ. ಎಲ್ಲ ವೇದಗಳ ಮೂಲಕ ತಿಳಿಯಲು ನಾನೇಯೋಗ್ಯನಾಗಿದ್ದೇನೆ ಹಾಗೂ ವೇದಾಂತದ ಕರ್ತೃ ಮತ್ತು ವೇದಗಳನ್ನು ಬಲ್ಲವನೂ ನಾನೇ ಆಗಿದ್ದೇನೆ. ॥15॥