ಆಯುಃಸತ್ತ್ವಬಲಾರೋಗ್ಯಸುಖಪ್ರೀತಿವಿವರ್ಧನಾಃ ।
ರಸ್ಯಾಃ ಸ್ನಿಗ್ಧಾಃ ಸ್ಥಿರಾ ಹೃದ್ಯಾ ಆಹಾರಾಃ ಸಾತ್ತ್ವಿಕಪ್ರಿಯಾಃ ॥
ಆಯುಸ್ಸು, ಬುದ್ಧಿ, ಬಲ, ಆರೋಗ್ಯ, ಸುಖ ಮತ್ತು ಪ್ರೀತಿಯನ್ನು ಹೆಚ್ಚಿಸುವ, ರಸಯುಕ್ತ, ಸ್ನೇಹಯುಕ್ತ, ಸ್ನಿಗ್ಧ, ಸ್ಥಿರವಾಗಿರುವ ಹಾಗೂ ಸ್ವಭಾವದಿಂದಲೇ ಮನಸ್ಸಿಗೆ ಪ್ರಿಯವಾದ ಭೋಜನ ಪದಾರ್ಥಗಳು ಸಾತ್ತ್ವಿಕ ಪುರುಷನಿಗೆ ಪ್ರಿಯವಾಗಿರುತ್ತವೆ. ॥8॥