ಶಮೋ ದಮಸ್ತಪಃ ಶೌಚಂ ಕ್ಷಾಂತಿರಾರ್ಜವಮೇವ ಚ ।
ಜ್ಞಾನಂ ವಿಜ್ಞಾನಮಾಸ್ತಿಕ್ಯಂ ಬ್ರಹ್ಮಕರ್ಮ ಸ್ವಭಾವಜಮ್ ॥
ಅಂತಃಕರಣದ ನಿಗ್ರಹ, ಇಂದ್ರಿಯಗಳ ಮೇಲೆ ಹತೋಟಿ, ಧರ್ಮಪಾಲನೆಗಾಗಿ ಕಷ್ಟ ಸಹಿಸುವುದು, ಒಳ ಹೊರಗೆ ಶುದ್ಧವಾಗಿರುವುದು, ಬೇರೆಯವರ ಅಪರಾಧಗಳನ್ನು ಕ್ಷಮಿಸುವುದು, ಮನಸ್ಸು, ಇಂದ್ರಿಯಗಳು ಮತ್ತು ಶರೀರವನ್ನು ಸರಳವಾಗಿರುವುದು, ವೇದ, ಶಾಸ್ತ್ರ, ದೇವರು ಮತ್ತು ಪರಲೋಕಾದಿಗಳಲ್ಲಿ ಶ್ರದ್ಧೆಯನ್ನಿಡುವುದು, ವೇದಶಾಸ್ತ್ರಗಳ ಅಧ್ಯಯನ ಮತ್ತು ಅಧ್ಯಾಪನ ಮಾಡುವುದು, ಪರಮಾತ್ಮ ತತ್ತ್ವದ ಅನುಭವ ಪಡೆಯುವುದು – ಇವೆಲ್ಲವೂ ಬ್ರಾಹ್ಮಣನ ಸ್ವಾಭಾವಿಕವಾದ ಕರ್ಮಗಳಾಗಿವೆ. ॥42॥