ಮನ್ಮನಾ ಭವ ಮದ್ಭಕ್ತೋ ಮದ್ಯಾಜೀ ಮಾಂ ನಮಸ್ಕುರು ।
ಮಾಮೇವೈಷ್ಯಸಿ ಸತ್ಯಂ ತೇ ಪ್ರತಿಜಾನೇ ಪ್ರಿಯೋಽಸಿ ಮೇ ॥
ಎಲೈ ಅರ್ಜುನ! ನೀನು ನನ್ನಲ್ಲಿ ಮನಸ್ಸುಳ್ಳವನಾಗು. ನನ್ನ ಭಕ್ತನಾಗು. ನನ್ನನ್ನು ಪೂಜಿಸು ಮತ್ತು ನನಗೆ ನಮಸ್ಕರಿಸು. ಹೀಗೆ ಮಾಡುವುದರಿಂದ ನೀನು ನನ್ನನ್ನೇ ಪಡೆಯುವೆ. ಇದನ್ನು ನಾನು ನಿನಗೆ ಸತ್ಯವಾಗಿ ಪ್ರತಿಜ್ಞಾಪೂರ್ವಕ ಹೇಳುವೆನು, ಏಕೆಂದರೆ ನೀನು ನನಗೆ ಅತ್ಯಂತ ಪ್ರಿಯನಾಗಿರುವೆ. ॥65॥